The state government will place an expert committee’s report on upgrading the University Visvesvaraya College of Engineering (UVCE) on the lines of IITs in the next state legislature session.
Receiving the report on Tuesday, Karnataka Deputy Chief Minister and Higher Education Minister Dr Ashwath Narayan said the UVCE’s development required special legislation. Prior to the acceptance of the report from the experts’ committee headed by IIIT-B Director Prof S Sadagopan, Narayan and members of the expert team reviewed the condition of the buildings and other infrastructure on the UVCE campus.
“The committee has recommended the need for a special legislation to upgrade the UVCE on the lines of IITs. We’ll present a bill in the next assembly session (on the matter),” he said. The new bill on UVCE will deal with aspects like appointing quality teaching staff, empowering the UVCE council to decide on the tuition fee, offering financial independence including mobilisation of funds by way of external donation and contribution from the alumni. This apart, UVCE will also get complete autonomy to conduct research activities, start new courses and frame industry-friendly syllabus.
– The Deccan Herald, 16/12/2020
ಐಐಟಿ ಮಾದರಿ ಯುವಿಸಿಇ ಅಭಿವೃದ್ಧಿ: ಡಿಸಿಎಂ ಅಶ್ವತ್ಥನಾರಾಯಣ
ಐಐಟಿ ಮಾದರಿಯಲ್ಲಿ ಯೂನಿವರ್ಸಿಟಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು (ಯುವಿಸಿಇ) ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆ ಅಗತ್ಯವಿದ್ದು, ಅದಕ್ಕಾಗಿ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಯುವಿಸಿಇ ಅಭಿವೃದ್ಧಿಗೆ ಕಾಯ್ದೆ ರೂಪಿಸುವ ಉದ್ದೇಶದಿಂದ ವಿವಿಧ ಐಐಟಿಗಳು ಹಾಗೂ ಐಐಎಂಗಳ ಕಾಯ್ದೆಗಳನ್ನು ಅಧ್ಯಯನ ಮಾಡಿ ಸಿದ್ಧಪಡಿಸಿದ ವರದಿಯನ್ನು ಐಐಐಟಿಬಿ ನಿರ್ದೇಶಕ ಎಸ್. ಸಡಗೋಪನ್ ನೇತೃತ್ವದ ಸಮಿತಿಯಿಂದ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆ ನೀಡುವ ಬಗ್ಗೆ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಿರುವ ಸಮಿತಿ, ಪ್ರತ್ಯೇಕ ಕಾಯ್ದೆಯ ಅಗತ್ಯವನ್ನು ಒತ್ತಿ ಹೇಳಿದೆ’ ಎಂದರು.
ಅದಕ್ಕೂ ಮೊದಲು, ಕೆ.ಆರ್. ವೃತ್ತದಲ್ಲಿರುವ ಯುವಿಸಿಇ ಕ್ಯಾಂಪಸ್ಗೆ ಸಮಿತಿಯ ಸದಸ್ಯರೊಂದಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ, ಕಟ್ಟಡಗಳ ನಿರ್ಮಾಣ, ಮೂಲಸೌಕರ್ಯ ಇತ್ಯಾದಿ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ಸಮಿತಿ ಅಧ್ಯಕ್ಷ ಎಸ್. ಸಡಗೋಪನ್, ಸಮಿತಿ ಸದಸ್ಯರಾದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್, ಬಿ. ಮುತ್ತುರಾಮನ್, ಪ್ರಶಾಂತ್ ಪ್ರಕಾಶ್ ನಾಗಾನಂದ ದೊರೆಸ್ವಾಮಿ, ನಾರಾಯಣನ್ ಇದ್ದರು
ಉದ್ದೇಶಿತ ಮಸೂದೆಯಲ್ಲಿರುವ ಅಂಶಗಳೇನು?:
- ಸರ್ಕಾರದ ಮೇಲೆ ಆರ್ಥಿಕ ಅವಲಂಬನೆ ತಗ್ಗಿಸಲು ಆಂತರಿಕ ಹಾಗೂ ಬಾಹ್ಯ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣಕ್ಕೆ ಅವಕಾಶ. ದೇಣಿಗೆ ಸ್ವೀಕಾರ, ಹಳೆಯ ವಿದ್ಯಾರ್ಥಿಗಳಿಂದ ಹಣಕಾಸು ನೆರವು ಪಡೆಯಲು ಅವಕಾಶ.
- ಅತ್ಯುತ್ತಮ ಗುಣಮಟ್ಟದ ಬೋಧಕ ಸಿಬ್ಬಂದಿ ನೇಮಿಸಿಕೊಂಡು, ಉತ್ತಮ ವೇತನ ನೀಡುವ ಜತೆಗೆ ಟ್ಯೂಷನ್ ಫೀ ನಿಗದಿ ಮಾಡುವ ಅಧಿಕಾರ ಯುವಿಸಿಇಗೇ ನೀಡುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ. ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ನೆರವು.
- ಉತ್ಕೃಷ್ಟ ಶೈಕ್ಷಣಿಕ ಹಿನ್ನೆಲೆಯ ಬೋಧಕರ ನೇಮಕ, ಸಂಶೋಧನೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ. ಹೊಸ ರೀತಿಯ ಪಠ್ಯ ಸೇರ್ಪಡೆಗೊಳಿಸುವ ಹಾಗೂ ಹೊಸ ಕೋರ್ಸುಗಳನ್ನು ಆರಂಭಿಸಲು ಯುವಿಸಿಇಗೆ ಅಧಿಕಾರ.
- ಆಡಳಿತದಲ್ಲಿ ಯುವಿಸಿಇಗೆ ಪೂರ್ಣ ಅಧಿಕಾರ ನೀಡುವುದರ ಜತೆಗೆ, ಸ್ವತಂತ್ರ ಅಸ್ತಿತ್ವ. ಒಟ್ಟಾರೆ ಮಾಲೀಕತ್ವ ಸರ್ಕಾರದ್ದೇ ಆಗಿದ್ದರೂ ಆಡಳಿತದಲ್ಲಿ ಯುವಿಸಿಇಯದ್ದೇ ಅಂತಿಮ ನಿರ್ಧಾರ. 11 ಸದಸ್ಯರ ಆಡಳಿತ ಮಂಡಳಿಯಲ್ಲಿ ಸರ್ಕಾರಕ್ಕೂ ಸಮಾನ ಪ್ರಾತಿನಿಧ್ಯ. ಮಂಡಳಿಯಲ್ಲಿ ಸರ್ಕಾರ, ಕೈಗಾರಿಕೆ, ಶೈಕ್ಷಣಿಕ ವಲಯದಿಂದ ತಲಾ ಮೂವರು ಸದಸ್ಯರು, ಹಳೆಯ ವಿದ್ಯಾರ್ಥಿಗಳಿಂದ ಇಬ್ಬರು ಸದಸ್ಯರು ಇರಬೇಕು.
– ಪ್ರಜಾವಾಣಿ ವಾರ್ತೆ, 16/12/2020




We thank the Deputy Chief minister and the Higher Education Minsiter, Dr Ashwath Narayan for taking keen interest and pushing forward the agenda of making UVCE a better institution in the lines of IIT. We also congratulate the Expert Committee members and appreciate their efforts as well. We will keep everyone posted about further updates and now is the time for all the alumni to come together and join hands to take UVCE to the next level.
Leave a Reply